ಆಪರೇಷನ್ ಕಮಲಕ್ಕೆ ಹೈಕಮಾಂಡ್‍ನಿಂದ ಹಸಿರು ನಿಶಾನೆ!

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳಿಸಬೇಕಾದರೆ ಸಮ್ಮಿಶ್ರ ಸರ್ಕಾರವನ್ನು ಬೀಳಿಸೋದು ಬಿಜೆಪಿಗೆ ಅನಿವಾರ್ಯ ಆದಂತಿದೆ. ಈ ಹಿನ್ನೆಲೆಯಲ್ಲಿ ರಾಜ್ಯನಾಯಕರಿಗೆ ‘ಆಪರೇಷನ್ ಕಮಲ’ಕ್ಕೆ ಮುಂದಾಗಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಸಂದೇಶವನ್ನು ರವಾನಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ಮೂರು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಈ ಸಂಬಂಧ ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಆದೇಶವನ್ನು ರಾಜ್ಯಕ್ಕೆ ತಂದಿದ್ದಾರೆ. 16 ರಿಂದ 23 ಶಾಸಕರ ಆಪರೇಷನ್‍ಗೆ ಬಿಜೆಪಿ ಹೈಕಮಾಂಡ್‍ನಿಂದ ಹಸಿರು ನಿಶಾನೆ ಸಿಕ್ಕಿದ್ದು, ಅದಕ್ಕಾಗಿ ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಬಿಎಸ್‍ವೈ ಮೆಗಾ ಪ್ಲ್ಯಾನ್ ಮಾಡಿದಾರೆಯಂತೆ. ಒಟ್ಟು ನಾಲ್ಕು ಹಂತಗಳಲ್ಲಿ ರಾಜ್ಯದ ವಿವಿಧ ಭಾಗಗಳ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯುವ ತಂತ್ರ ಎಂದು ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಸಮ್ಮಿಶ್ರ ಸರ್ಕಾರ ಬೀಳಿಸಲು ಎಲ್ಲ ರೀತಿಯಿಂದಲೂ ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ ಸಚಿವರು ಆರೋಪಿಸುತ್ತಿದ್ದಾರೆ. ಇತ್ತ ಬಿಜೆಪಿ ನಾಯಕರು ನಾವು ಸರ್ಕಾರವನು ಬೀಳಿಸುವ ಪ್ರಯತ್ನ ಮಾಡಲ್ಲ. ರಾಜ್ಯದ ಜನತೆ ಎಲ್ಲವನ್ನು ಗಮನಿಸುತ್ತಿದ್ದು, ಸರ್ಕಾರ ತಾನೇ ಆಗಿಯೇ ಬೀಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ