ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯ ದಾಳಿಗೆ ಇಬ್ಬರು ಉಗ್ರರು ಹತ

ಕುಪ್ವಾರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಹಂದ್ವಾರದ ಗುಲೂರ ಏರಿಯಾದಲ್ಲಿ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

ಬೆಳಗ್ಗೆಯಿಂದಲೇ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರನ್ನು ಹತ್ಯೆಗೈಯ್ಯುವಲ್ಲಿ ಸೇನೆ ಯಶಸ್ವಿಯಾಗಿದೆ. ಉಗ್ರರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಸೇನೆ ಈವರೆಗೆ ಹಲವಾರು ಉಗ್ರರನ್ನು ಗುಂಡಿಕ್ಕಿ ಕೊಂದಿದೆ.

ಮತ್ತಷ್ಟು ಉಗ್ರರು ಅಡಗಿರುವ ಶಂಕೆಯಿರುವ ಕಾರಣ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ