ಜಾರಕಿಹೊಳಿ ಸಹೋದರರಿಗೆ ಬುದ್ದಿ ಹೇಳಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಸೆ.12-ಕಾಂಗ್ರೆಸ್ ಅತೃಪ್ತರ ಮನವೊಲಿಸಲು ಹೈಕಮಾಂಡ್ ಎಂಟ್ರಿ ಆಗಿದೆ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಂಗಳೂರಿಗೆ ಆಗಮಿಸಿ ಜಾರಕಿ ಹೊಳಿ ಸೋದರರೊಂದಿಗೆ ಮಾತುಕತೆ ನಡೆಸಿದರು.
ಸಚಿವ ರಮೇಶ್ ಜಾರಕಿ ಹೊಳಿ ಖರ್ಗೆ ನಿವಾಸಕ್ಕೆ ತೆರಳಿ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಕೆರಳಿಸಿತ್ತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಅವರು ನಮ್ಮ ತಂದೆಯವರಿದ್ದಂತೆ. ಅವರು ಹೇಳಿದಂತೆ ಕೇಳುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಹೇಳಿದರು.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಂಗ್ರೆಸ್‍ನಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಬಿಜೆಪಿಯವರು ಅಧಿಕಾರ ಪಡೆಯುವ ಹಗಲುಗನಸು ಕಾಣುತ್ತಿದ್ದಾರೆ. ಅದು ಸಾಧ್ಯವಾಗುವುದಿಲ್ಲ ಎಂದರು.
ಬೆಳಗಾವಿ ಕಾಂಗ್ರೆಸ್‍ನಲ್ಲಿ ಭಿನ್ನಮತ ಉಲ್ಬಣಗೊಂಡಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಏನೂ ಆಗಿಲ್ಲ. ನಾವು ಕುಳಿತು ಮಾತನಾಡುತ್ತೇವೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ