ರಾಜ್ಯದಲ್ಲಿ ಮಳೆ ಸಿಂಚನದ ನಿರೀಕ್ಷೆ

ಬೆಂಗಳೂರು,ಸೆ.12- ಮೇಲ್ಮೈ ಸುಳಿಗಾಳಿ ಎದ್ದಿದ್ದು, ಇಂದು ಅಥವಾ ನಾಳೆ ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಉಪನಿರ್ದೇಶಕ ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ನಿನ್ನೆ ಕೂಡ ರಾಜ್ಯದ ಕೆಲವೆಡೆ ಚದುರಿದಂತೆ ಮಳೆ ಆಗಿದೆ. ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಉಂಟಾಗಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಮುನ್ಸೂಚನೆ ಇದೆ.
ಹೈದರಾಬಾದ್-ಕರ್ನಾಟಕ ಭಾಗದ ಬೀದರ್, ಗುಲ್ಬರ್ಗ ಜಿಲ್ಲೆಗಳು, ಮಧ್ಯ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಬೆಂಗಳೂರು ಸೇರಿದಂತೆ ಹಲವೆಡೆ ಚದುರಿದಂತೆ ಸಾಧಾರಣ ಮಳೆ ಬೀಳಲಿದೆ. ಆದರೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ