ಹಾಸನ,ಸೆ. 12- ಅಲಂಕಾರಿಕಾ ಶಿಲೆ, ಕಟ್ಟಡ ಕಲ್ಲು ಗಣಿಗಾರಿಕೆ ನಡೆಸಲು ಪರವಾನಗಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಪರವಾನಗಿ ನೀಡಲು ಖುದ್ದು ಸ್ಥಳ ಪರಿಶೀಲಿಸುವುದರ ಜೊತೆಗೆ ಸರ್ಕಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕ್ರಷರ್ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಪರವಾನಗಿ ನೀಡುವಾಗ ಸರ್ಕಾರಿ ನಿಯಮಗಳು ಉಲ್ಲಂಘನೆಯಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಯಾವುದೇ ಲೋಪ ಕಂಡುಬಂದಲ್ಲಿ ತಮ್ಮನೇ ಹೋಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಗಣಿಗಾರಿಕೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಅಕ್ರಮ ಮರಳನ್ನು ಸರ್ಕಾರಿ ಕಾಮಗಾರಿಗಳಿಗೆ ಬಳಕೆ ಮಾಡುವಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿಗೆ ಅನುಮತಿಗಾಗಿ ಕಳುಹಿಸುವ ಕಡತಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಲು ಕ್ರಮವಹಿಸುವಂತೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪೆÇ್ರೀ ಐ.ಎ.ಎಸ್. ಅಧಿಕಾರಿ ಪ್ರಿಯಾಂಕ ಎಂ., ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.