ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ಭವವಾಗಿರುವ ರಾಜಕೀಯ ಬಿಕ್ಕಟ್ಟಿಗೆ ಕಡಿವಾಣಹಾಕಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೊಸ ತಂತ್ರವೊಂದನ್ನು ರೂಪಿಸಿದ್ದಾರೆ ಎನ್ನಲಾಗಿದೆ.
ಬೆಳಗಾವಿ ರಾಜಕಾರಣದಿಂದ ಸಮ್ಮಿಶ್ರ ಸರ್ಕಾರಕ್ಕೆ ಕುತ್ತು ಬರುವ ಹಿನ್ನೆಲೆಯಲ್ಲಿ ಬೆಳಗಾವಿಯನ್ನು 3 ಭಾಗಗಳಾಗಿ ವಿಭಜಿಸಲು ಚಿಂತನೆ ನಡೆಸಲಾಗಿದೆ.
ಗೋಕಾಕ್ ಹಾಗೂ ಚಿಕ್ಕೋಡಿಯನ್ನು ಹೊಸ ಜಿಲ್ಲೆಗಳಾಗಿ ರಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
3 ಲೋಕಸಭಾ, 18 ವಿಧಾನಸಭಾ ಕ್ಷೇತ್ರ ಒಳಗೊಂಡ ಬೆಳಗಾವಿ ಜಿಲ್ಲೆ ವಿಭಜನೆ ಆದರೆ ರಾಜಕೀಯ ಸಮಸ್ಯೆಗೆ ಕಡಿವಾಣ ಬೀಳುವ ಸಾಧ್ಯತೆಯಿದೆಯಿದೆ ಎಂಬುದು ಸಿಎಂ ಆಲೋಚನೆ ಎನ್ನಲಾಗಿದೆ. ಆದರೆ ಬೆಳಗಾವಿ ವಿಭಜನೆಗೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ನೀಡಿದ್ದಾರೆ.