ಮಾಜಿ ಸಿಎಂ ಸಿದ್ದರಾಮಯ್ಯ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಯೂರೋಪ್ ಪ್ರವಾಸದಿಂದ ವಾಪಸ್ ಬಂದ ಬಳಿಕ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರು ಸೇರಿದಂತೆ ಹಲವರು ಆಕಾಂಕ್ಷಿಗಳಿದ್ದಾರೆ. ಸಚಿವ ಸ್ಥಾನಕ್ಕಾಗಿ ಆಸೆಪಡುವುದು ಸಹಜ ಕೂಡ. ಹೀಗಾಗಿ ಮಾಜಿ ಸಿಎಂ ವಾಪಸ್ ಆದ ಬಳಿಕ ಈ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಬೆಳಗಾವಿ‌ ಮತ್ತು ಬಳ್ಳಾರಿ ಜಿಲ್ಲಾ ಮಟ್ಟದಲ್ಲಿ ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳಿವೆ. ಅವನ್ನು ಕೂಡ ಶೀಘ್ರ ಬಗೆ ಹರಿಸುತ್ತೇವೆ ಎಂದರು.

ಇನ್ನು ಮೈತ್ರಿ ಸರ್ಕಾರ ಸುಭದ್ರವಾಗಿದೆ. ಯಾವ ಚಿಂತೆಯೂ ಇಲ್ಲ ಎಂದ ಪರಮೇಶ್ವರ್, ಶೀಘ್ರದಲ್ಲೇ ಸಿಹಿ ಸುದ್ದಿ ಕೊಡ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿಹಿ ಸಿಕ್ಕಿದ್ರೆ ತಿನ್ನಲೀ ಬಿಡಿ ಎಂದು ವ್ಯಂಗ್ಯವಾಡಿದರು.

ಇನ್ನು ಬಿಜೆಪಿಯವರು ಕೈ ಶಾಸಕರಿಗೆ ಹಣದ ಆಮಿಷವಿಒಡ್ಡುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೀಗಾಗಿ ಬಿಜೆಪಿ ವಿರುದ್ದ ಎಸಿಬಿ, ಐಟಿಗೆ ಕಾಂಗ್ರೆಸ್ ದೂರು ನೀಡಲು ನಿರ್ಧರಿಸಿದೆ ಎಂದರು.

ಕೆಲವು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಹಣದ ಅಮಿಷ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಎಸಿಬಿ ಹಾಗೂ ಐಟಿಗೆ ದೂರು ನೀಡಲಾಗುವುದು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ