ರಸ್ತೆ ವಿಭಜಕದ ಬಳಿ ಅಪರಿಚಿತ ವ್ಯಕ್ತಿ ಅನುಮಾನಾಸ್ಪದವಾಗಿ ಸಾವು

ಬೆಂಗಳೂರು,ಸೆ.14- ರಸ್ತೆ ವಿಭಜಕದ ಬಳಿ ಅಪರಿಚಿತ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಯಲಹಂಕ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯ ಬೆಂಗಳೂರು-ಬಳ್ಳಾರಿ ರಸ್ತೆಯ ಬಿಎಸ್‍ಎಫ್ ಗೇಟ್ ಸಮೀಪದ ರಸ್ತೆ ವಿಭಜಕದ ಬಳಿ ಸುಮಾರು 40-45 ವರ್ಷದ ಅಪರಿಚಿತ ವ್ಯಕ್ತಿಯ ಶವ ಮಧ್ಯರಾತ್ರಿ 12 ಗಂಟೆಯಲ್ಲಿ ಪತ್ತೆಯಾಗಿದೆ.

ಈ ವ್ಯಕ್ತಿ ಅಪಘಾತದಿಂದ ಮೃತಪಟ್ಟಿದ್ದಾರೋ ಅಥವಾ ಮದ್ಯಪಾನ ಮಾಡಿ ಬಿದ್ದು ಮೃತಪಟ್ಟಿದ್ದಾರೋ ಅಥವಾ ಯಾರಾದರೂ ಕೊಲೆ ಮಾಡಿದ್ದಾರೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಸುದ್ದಿ ತಿಳಿದ ಯಲಹಂಕ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಈ ವ್ಯಕ್ತಿಯ ವಾರಸುದಾರರು ಯಲಹಂಕ ಸಂಚಾರಿ ಪೆÇಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ