ಸೆ.18ರಂದು ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆ

ಬೆಂಗಳೂರು, ಸೆ.14- ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆ ಸೆ.18ರಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ ನೇತೃತ್ವದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳ ಸಭೆಯನ್ನು ಬೆಂಗಳೂರಿನಲ್ಲಿ ಕೇಂದ್ರ ಸಚಿವರು ಕರೆದಿದ್ದಾರೆ ಎಂದರು.

ನೆರೆ ಸಂತ್ರಸ್ತರಿಗೆ ಧರ್ಮಸ್ಥಳದಿಂದ ದೇಣಿಗೆ:
ಮಹಾ ಮಳೆಯಿಂದ ಹಾನಿಗೀಡಾಗಿರುವ ಕೊಡಗಿಗೆ ಧರ್ಮಸ್ಥಳದವತಿಯಿಂದ 10ಕೋಟಿ ರೂ. ದೇಣಿಗೆ ನೀಡಲಾಗುತ್ತಿದೆ.
ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸುರೇಂದ್ರ ಕುಮಾರ್ ಅವರು ಎರಡು ಕೋಟಿ ರೂ. ಚೆಕ್ಕನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು.
ಚೆಕ್ ಸ್ವೀಕರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ 10ಕೋಟಿ ನೀಡುತ್ತಿದ್ದಾರೆ. ಅದರಲ್ಲಿ 8 ಕೋಟಿ ರೂ.ಗಳನ್ನು ಅವರೇ ಗುರುತಿಸಿರುವ ಫಲಾನುಭವಿಗಳಿಗೆ ತಲಾ 65ಸಾವಿರ ರೂ. ನೀಡಲಿದ್ದಾರೆ. ಎರಡು ಕೋಟಿ ರೂ. ಚೆಕ್ಕನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ