ಬೆಂಗಳೂರು, ಸೆ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.
ನಾಳೆ ಮಧ್ಯಾಹ್ನ 3ರಿಂದ ಸಂಜೆ 5ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಮುಖ್ಯಮಂತ್ರಿ ಬೆಳಗಾವಿ ಜಿಲ್ಲೆ ಪ್ರವಾಸ ಕೈಗೊಳ್ಳಲಿರುವುದರಿಂದ ಶನಿವಾರ ಬೆಂಗಳೂರಿನಲ್ಲಿ ನಡೆಸುತ್ತಿದ್ದ ಜನತಾ ದರ್ಶನವನ್ನು ಬೆಳಗಾವಿಯಲ್ಲೇ ನಡೆಸಲಿದ್ದಾರೆ. ಜನತಾದರ್ಶನ ಸಂದರ್ಭದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಕರ್ನಾಟಕ ಲಾ ಸೊಸೈಟಿಯ ಅಮೃತ ಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು ಭಾಗವಹಿಸುತ್ತಿದ್ದಾರೆ. ಆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೂಡ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿಗಳನ್ನು ಬೀಳ್ಕೊಟ್ಟ ನಂತರ ಬೆಳಗಾವಿಯಲ್ಲಿ ನಿರ್ಮಿಸಿರುವ ಕನ್ನಡ ಭವನವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.