ಮಹದಾಯಿ ನದಿ ವಿವಾದ: ಸದ್ಯದಲ್ಲೇ ಸರ್ವಪಕ್ಷಗಳ ಸಭೆ

ಬೆಂಗಳೂರು, ಸೆ.14- ಮಹದಾಯಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಮಹದಾಯಿ ನ್ಯಾಯಾಧೀಕರಣದ ತೀರ್ಪು ಪ್ರಕಟವಾಗಿದೆ. ತೀರ್ಪಿಗೆ ಸಂಬಂಧಿಸಿದಂತೆ ಇಂದು ಕಾನೂನು, ನೀರಾವರಿ ತಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಮುಂದೆ ಕೈಗೊಳ್ಳಬೇಕಾಗಿರುವ ನಿರ್ಧಾರದ ಬಗ್ಗೆ ಸಲಹೆ ಪಡೆಯಲಾಗಿದೆ ಎಂದರು.

ನೀರಾವರಿ ಹಾಗೂ ಕಾನೂನು ತಜ್ಞರು ನೀಡಿರುವ ಸಲಹೆಗಳನ್ನು ಆಧರಿಸಿ ಸರ್ವ ಪಕ್ಷಗಳ ಸಭೆಯಲ್ಲಿ ಚರ್ಚಿಸಿ ರಾಜ್ಯ ಯಾವ ನಿಲುವು ತಳೆಯಬೇಕು ಎಂಬುದರ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ