ಸಂತ ಎಲೋಷಿಯನ್ ಕಾಲೇಜಿನ ಮಿನಿ ಥಿಯೇಟರ್‍ನಲ್ಲಿ ಪ್ರಾದೇಶಿಕ ಭಾಷಾ ಚಲನಚಿತ್ರೋತ್ಸವ

Varta Mitra News

ಬೆಂಗಳೂರು, ಸೆ.15- ಮಂಗಳೂರಿನ ಸಂತ ಎಲೋಷಿಯನ್ ಕಾಲೇಜಿನ ಮಿನಿ ಥಿಯೇಟರ್‍ನಲ್ಲಿ ಸೆ.21 ರಿಂದ 23ರ ವರೆಗೆ ಮೂರು ದಿನಗಳ ಕಾಲ ಪ್ರಾದೇಶಿಕ ಭಾಷಾ ಚಲನಚಿತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ವಾರ್ತಾ ಭವನದಲ್ಲಿಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಅಕಾಡೆಮಿಯು ವಾರ್ತಾ ಇಲಾಖೆಯ ಸಹಯೋಗದಲ್ಲಿ ಪ್ರಾದೇಶಿಕ ಭಾಷಾ ಚಲನಚಿತ್ರೋತ್ಸವವನ್ನು ಹಮ್ಮಿಕೊಂಡಿದ್ದು, ಜಿಲ್ಲೆಗಳಲ್ಲಿ ಪ್ರಾದೇಶಿಕ ಚಿತ್ರಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಉತ್ಸವವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಸೆ.21ರಂದು ಬೆಳಗ್ಗೆ 10 ಗಂಟೆಗೆ ಸಂತ ಎಲೋಷಿಯನ್ ಕಾಲೇಜಿನ ಮಿನಿ ಥಿಯೇಟರ್‍ನಲ್ಲಿ ಸಚಿವ ಯು.ಟಿ.ಖಾದರ್ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಫಾದರ್ ಪ್ರವೀಣ್ ಮಾರ್ಟೀಸ್ ಅಧ್ಯಕ್ಷತೆ ವಹಿಸುವರು. ನಿರ್ದೇಶಕ ವೃಷಭ್‍ಶೆಟ್ಟಿ, ನಟ-ನಿರ್ದೇಶಕ ಶಿವಧ್ವಜ್ ಸೇರಿದಂತೆ ಚಲನಚಿತ್ರರಂಗದ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಮೊದಲನೆ ದಿನ ಖ್ಯಾತ ಹಿರಿಯ ನಟ ನಟಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರದರ್ಶನ ಇರುತ್ತದೆ. ನಂತರ ತುಳು ಭಾಷೆಯ ಪಡಾಯ್ ಚಿತ್ರ ಪ್ರದರ್ಶನವಿರುತ್ತದೆ. ಇದಲ್ಲದೆ, ಕೊಡವ ಭಾಷೆಯ ತಳಂಗ್‍ನೀರ್ ಹಾಗೂ ಬಂಜಾರಾ, ಕೊಂಕಣಿ, ಬ್ಯಾರಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಒಟ್ಟಾರೆ ಮೂರು ದಿನಗಳಲ್ಲಿ 9 ಚಿತ್ರ ಪ್ರದರ್ಶನಗಳು ಇರುತ್ತವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಾದೇಶಿಕ ಭಾಷಾ ಚಲನಚಿತ್ರೋತ್ಸವದ ಸಂಚಾಲಕ ಪೆÇ್ರ.ನ.ದಾಮೋದರ್‍ಶೆಟ್ಟಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ