ಬೆಂಗಳೂರು,ಸೆ.15-ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ರಮ್ಯಾ ಸ್ಪರ್ಧಿಸುವುದಿಲ್ಲವಂತೆ. ರಮ್ಯಾ ಪಾಲಿಗೆ ತವರು ಜಿಲ್ಲೆ ಮಂಡ್ಯದ ಬಾಗಿಲು ಮುಚ್ಚಿದಂತಾಗಿದೆ.
ಈ ಬಗ್ಗೆ ರಮ್ಯಾ ತಾಯಿ ರಂಜಿತ ಅವರು ಸ್ಪಷ್ಟನೆ ನೀಡಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಮ್ಯಾ ಅವರು ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆಗೆ ರಮ್ಯಾ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಸುಳಿವು ನೀಡಿದ್ದಾರೆ.
ಈ ಬಾರಿಯ ಉಪಚುನಾವಣೆಯಲ್ಲಿ ರಮ್ಯಾ ಸ್ಪರ್ಧಿಸದಿದ್ದರೆ ನಾನು ಸ್ಪರ್ಧಿಸುವ ಆಸೆ ಹೊಂದಿದ್ದೆ. ಆದರೆ ಮೈತ್ರಿಯಾಗುವ ಕಾರಣ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಯುತ್ತಿಲ್ಲ. ಜೆಡಿಎಸ್ ಪಕ್ಷದವರು ಮಂಡ್ಯ ಕ್ಷೇತ್ರವನ್ನು ಬಿಟ್ಟು ಕೊಡುವಂತೆ ಕೇಳಿದ್ದಾರೆ. ನಮ್ಮ ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸದೃಢವಾಗಿರಬೇಕೆಂಬುದು ನಮ್ಮ ಆಶಯ. ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ. ಅದು ಫಲ ನೀಡುವುದಿಲ್ಲ ಎಂದು ಅವರು ಹೇಳಿದರು.