
ಬೆಂಗಳೂರು: ಪ್ರಸಕ್ತ ರಾಜಕೀಯ ಬೆಳವಣಿಗಗಳ ಆಗು ಹೋಗುಗಳ ಕುರಿತು ಹಿರಿಯ ನಾಯಕರುಗಳ ಜೊತೆ ಚರ್ಚಿಸಿದ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಸೆಪ್ಟೆಂಬರ್ 19 ರಂದು ರಾಜ್ಯದ ಎಲ್ಲಾ ನಾಯಕರುಗಳ ಜೊತೆ ಸಭೆ ನಡೆಸಲಿದ್ದಾರೆ.
ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ರಾಷ್ಚ್ರೀಯ ಕಾರ್ಯಕಾರಿಣಿಯಲ್ಲಿ ನಡೆದ ವಿಷಯಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಮ್ಮಿಶ್ರ ಸರ್ಕಾರ ತಾನಾಗೆ ಬಿದ್ದು ಹೋಗುವವರೆಗೂ ತಾಳ್ಮೆಯಿಂದ ಕಾಯುವಂತೆ ಕೇಂದ್ರ ಬಿಜೆಪಿ ನಾಯಕರು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ,
ಬೆಳಗಾವಿ ಜಾರಕಿಹೊಳಿ ಸಹೋದರರ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶದಿಂದ ಆಗಮಿಸಿದ ನಂತರ ಆಗುವ ಬೆಳವಣಿಗೆಗಳನ್ನು ಗಮನಿಸಿ ನಂತರ ನಿಧಾನವಾಗಿ ಯಾವ ಹೆಜ್ಜೆ ಇಡಬೇಕು ಎಂದು ಬಿಜೆಪಿ ಕಾಯುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದ್ದು, ಈ ಹೇಳಿಕೆಯನ್ನು ನಿರಾಕರಿಸಿದ್ದಾರೆ