ಹುಬ್ಬಳ್ಳಿ: ಬೆಳಗಾವಿಯಲ್ಲಿ ಇಂದು ನಡೆಯಲಿರುವ ಕರ್ನಾಟಕ ಲಾ ಸೊಸೈಟಿಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಭಾರತದ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಶ್ರೀ ದೀಪಕ್ ಮಿಶ್ರಾ ಅವರನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿಂದು ಜಿಲ್ಲಾಡಳಿತದಿಂದ ಬರಮಾಡಿಕೊಂಡು ಗೌರವ ವಂದನೆ ಸಲ್ಲಿಸಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಮೋಹನ ಶಾಂತನಗೌಡರ್, ಎಸ್.ಅಬ್ದುಲ್ ನಜೀರ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ,ನ್ಯಾಯಮೂರ್ತಿ ರವಿ ಮಳಿಮಠ, ಜಿಲ್ಲಾಧಿಕಾರಿ ದೀಪಾ ಚೋಳನ್, ಹು-ಧಾ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಈಶಪ್ಪ ಭೂತೆ, ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಸುಪ್ರಮಾ ದೀಪಕ್ ಮಿಶ್ರಾ ಸೇರಿದಂತೆ ಅನೇಕ ಗಣ್ಯರು ಇದ್ದರು.