ಲೋಕಸಭಾ ಚುನಾವಣೆಗೂ ಮುನ್ನ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ

Varta Mitra News

ಅಲಹಾಬಾದ್ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ರಾಮ ಮಂದಿರ ಜಪ ಮಾಡುವುದು ಸಾಮಾನ್ಯ. ಆದರೆ ಈಬಾರಿ ಒಂದು ಹೆಜ್ಜೆ ಮುಂದಡಿಯಿಟ್ಟಂತಿರುವ ಬಿಜೆಪಿ, ಚುನಾವಣೆಗೂ ಮುನ್ನ ರಾಮ ಮಂದಿರ ಕಾರ್ಯ ಆರಂಭವಾಗುತ್ತೆ ಎಂದಿದೆ.

ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಆಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಮಾಜಿ ಬಿಜೆಪಿ ಸಂಸದ ಹಾಗೂ ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ.

ಹೈದ್ರಾಬಾದ್ ನಲ್ಲಿ ಜುಲೈ ತಿಂಗಳಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, 2019ರ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ರಾಮಮಂದಿರ ನಿರ್ಮಾಣ ಆಗಲಿದೆ ಎಂದು ಹೇಳಿಕೆ ನೀಡಿದ್ದರು. ಆದಾಗ್ಯೂ, ನಂತರ ಅಮಿತ್ ಶಾ ಆ ರೀತಿ ಹೇಳಿಕೆ ನೀಡಿಲ್ಲ ಎಂದು ಪಕ್ಷ ಹೇಳಿಕೆ ನೀಡಿತ್ತು.

ಅಯೋದ್ಯೆಯಲ್ಲಿ ರಾಮ ಆಶೀರ್ವದಿಸಿದ್ದಾಗ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜುಲೈ 25 ರಂದು ಹೇಳಿಕೆ ನೀಡಿದ್ದರು.

ಈಗ ರಾಮ್ ವಿಲಾಸ್ ವೇದಾಂತಿಯವರು, ರಾಮ ಮಂದಿರ ವಿವಾದವನ್ನು ಬಿಜೆಪಿ ಬಗೆಹರಿಸಲಿದ್ದು, ಸಾರ್ವತ್ರಿಕ ಚುನಾವಣೆಗೂ ಮುಂಚಿತವಾಗಿ ಮಂದಿರ ಕಟ್ಟಡ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ