ಅತೃಪ್ತರನ್ನು ರೆಸಾರ್ಟ್ ನಲ್ಲಿರಿಸಲು ಮುಂದಾದ ಕಾಂಗ್ರೆಸ್!

ಬೆಂಗಳೂರುಬಿಜೆಪಿಯ ಆಪರೇಷನ್ ಕಮಲದಿಂದ ಅತೃಪ್ತ ಶಾಸಕರನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ರೆಸಾರ್ಟ್ ರಾಜಕಾರಣಕ್ಕೆ ಮತ್ತೊಮ್ಮೆ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶನಿವಾರ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಕೆ.ಸಿ.ವೇಣುಗೋಪಾಲ್ ರೊಂದಿಗೆ ಕಾಂಗ್ರೆಸ್ ಕೈ ನಾಯಕರ ನಡುವೆ ಸುದೀರ್ಘ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಂದ ಶಾಸಕರನ್ನು ಸೆಳೆಯುವ ಬಿಜೆಪಿ ತಂತ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಹೀಗಾಗಿ ಆಪರೇಷನ್ ಕಮಲಕ್ಕೆ ಒಳಗಾಗುತ್ತಿರುವ ಶಾಸಕರ ಮೇಲೆ ಹದ್ದಿನ ಕಣ್ಣಿಡಲು ಸೂಚಿಸಿದ್ದರು. ಅಲ್ಲದೇ ವಿಶೇಷವಾಗಿ ಬಳ್ಳಾರಿ ಕಾಂಗ್ರೆಸ್ ಶಾಸಕರ ಮೇಲೆ ಹೆಚ್ಚು ಗಮನ ಹರಿಸುವಂತೆ ಸಭೆಯಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ.

ಯಾವುದೇ ಕಾರಣಕ್ಕೂ ಶಾಸಕರು ಬಿಜೆಪಿಯ ಗಾಳಕ್ಕೆ ಸಿಲುಕದ ರೀತಿ ಕ್ರಮ ವಹಿಸಲು ಸೂಚಿಸಿದ್ದಾರೆ. ಅಲ್ಲದೇ ಅಗತ್ಯ ಕ್ರಮ ಬಿದ್ದರೆ ಅಂತಹ ಅತೃಪ್ತ ಶಾಸಕರನ್ನು ರೆಸಾರ್ಟ್ ಗೆ ಸ್ಥಳಾಂತರಿಸುವ ಬಗ್ಗೆಯೂ ಚರ್ಚೆ ನಡೆದಿದೆಯಂತೆ. ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಶಾಸಕರು ಬಲಿಯಾಗದಂತೆ ಕಾಂಗ್ರೆಸ್ ಕಣ್ಗಾವಲು ಹಾಕಿದ್ದು, ಇನ್ನೆರೆಡು ದಿನಗಳಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಬಗ್ಗೆಯೂ ವೇಣುಗೋಪಾಲ್ ತೀರ್ಮಾನ ಕೈಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ