ಬೆಂಗಳೂರು, ಸೆ.16-ಬಿಜೆಪಿ ನೀತಿಗೆಟ್ಟ ರಾಜಕಾರಣ ಮಾಡುತ್ತಿದೆ. ಬಿಬಿಎಂಪಿಯಲ್ಲೂ ಸಹ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಆರೋಪ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಗುಂಪೆÇಂದು ಸರ್ಕಾರವನ್ನು ಬೀಳಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದೆ. ಬಿಬಿಎಂಪಿಗೂ ಈ ಪ್ರಯತ್ನವನ್ನು ವಿಸ್ತರಿಸಿದೆ. ಈ ಯಾವುದೇ ಪ್ರಯತ್ನ ಅವರಿಗೆ ಫಲ ನೀಡುವುದಿಲ್ಲ ಎಂದು ಹೇಳಿದರು.
ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯನವರ ಹೆಸರನ್ನು ಅನಾವಶ್ಯಕವಾಗಿ ತರಲಾಗುತ್ತಿದೆ. ಅವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ. ಬಿಜೆಪಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ. ಸಿದ್ದರಾಮಯ್ಯನವರು ಮಾಡುತ್ತಿಲ್ಲ ಎಂದು ಹೇಳಿದರು.
ಜಾರಕಿ ಹೊಳಿ ಸಹೋದರರ ಸಮಸ್ಯೆ ಬೆಳಗಾವಿಗೆ ಜಿಲ್ಲೆಗೆ ಸೀಮಿತವಾಗಿದ್ದು. ಅವರಿಗೆ ಅಸ್ಥಿರಗೊಳಿಸುವ ಉದ್ದೇಶವಿಲ್ಲ. ಈಗಾಗಲೇ ಅವರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ ಎಂದರು.