ವಿಧಾನ ಪರಿಷತ್ ಆಯ್ಕೆಗೆ ಬ್ರಾಹ್ಮಣರಿಗೆ ಅವಕಾಶ ನೀಡಿ

ಬೆಂಗಳೂರು, ಸೆ.17- ಅಕ್ಟೋಬರ್ 3ರಂದು ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಒಂದು ಸ್ಥಾನ ನೀಡಬೇಕೆಂದು ಹೆಬ್ಬಾಳ ಬ್ರಾಹ್ಮಣ ಮಹಾಸಭಾ ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಅಧ್ಯಕ್ಷ ಸುರೇಶ್ ಶಾಸ್ತ್ರಿ, ನಮ್ಮ ಸಮುದಾಯವು ಧಾರ್ಮಿಕ-ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಮುಂದಿದ್ದರೂ ರಾಜಕೀಯ ಕ್ಷೇತ್ರದಲ್ಲಿ ಹಿಂದಿದೆ.ಸಮುದಾಯದ ಅಭಿವೃದ್ಧಿಗೆ ಶ್ರಮಿಸುವವರ ಸಂಖ್ಯೆ ಅತ್ಯಂತ ಕಡಿಮೆ ಇದೆ.ಆದರೆ ಚುನಾವಣಾ ಸಂದರ್ಭದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಮುದಾಯದ ಅಭಿವೃದ್ಧಿಯಲ್ಲಿ ಹಿಂದೆ ಸರಿದಿದೆ ಎಂದರು.

ಶೇ.80ಕ್ಕೂ ಹೆಚ್ಚು ಸಮುದಾಯದವರು ಆರ್ಥಿಕವಾಗಿ, ರಾಜಕೀಯವಾಗಿ ಸಮುದಾಯದಿಂದ ಜನಪ್ರತಿನಿಧಿಗಳ ಅವಶ್ಯಕತೆ ಇದೆ ಎಂದರು.
ವಿಧಾನಪರಿಷತ್‍ನಲ್ಲಿ ಮೂರು ಸ್ಥಾನ ಖಾಲಿಯಿದ್ದು, ಸಾಮಾಜಿಕ ನ್ಯಾಯದಡಿ ಒಂದು ಸ್ಥಾನವನ್ನು ಬ್ರಾಹ್ಮಣ ಸಮುದಾಯಕ್ಕೆ ನೀಡಬೇಕೆಂದು ತಿಳಿಸಿದರು.
ಈ ಮೊದಲು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಬಿ.ಕೆ.ಚಂದ್ರಶೇಖರ್ ಅವರನ್ನು ವಿಧಾನಪರಿಷತ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ನಂತರ ಸುಮಾರು ಎರಡು ದಶಕಗಳಿಂದ ಬ್ರಾಹ್ಮಣ ಸಮುದಾಯಕ್ಕೆ ವಿಧಾನಪರಿಷತ್‍ಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆ ಮಾಡಿಲ್ಲ ಎಂದರು.

ಪ್ರಸ್ತುತ ಕೆಪಿಸಿಸಿ ಸದಸ್ಯರಾಗಿರುವ ಎಲ್.ಜಯಸಿಂಹರವರು ನಾಗಶೆಟ್ಟಿಹಳ್ಳಿಯ ನಿವಾಸಿಯಾಗಿದ್ದು, ಸುಮಾರು ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿದ್ದಾರೆ. ರಾಜ್ಯ ಪ್ರಚಾರ ಸಮಿತಿಯ ಕಾರ್ಯದರ್ಶಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾ ತೆರೆಮರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಿಷ್ಠಾವಂತ ಪ್ರಾಮಾಣಿಕ ಕಾರ್ಯಕರ್ತ ಶ್ರೀ. ಎಲ್.ಜಯಸಿಂಹ ಅವರನು ವಿಧಾನಪರಿಷತ್‍ಗೆ ಆಯ್ಕೆ ಮಾಡಬೇಕಾಗಿದೆ ಎಂದು ಮನವಿ ಮಾಡಿಕೊಳ್ಳುತ್ತೇವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ