ಬೆಂಗಳೂರು, ಸೆ.17-ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶುಭಾಷಯ ಕೋರಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಷಯ ಕೋರಿ ಪತ್ರ ಬರೆದಿದ್ದು, ದೇಶಕ್ಕೆ ಇನ್ನಷ್ಟು ಸೇವೆ ಮಾಡಲು ದೇವರು ನಿಮಗೆ ಆಯುಷ್ಯ ಮತ್ತು ಆರೋಗ್ಯವನ್ನು ಆ ಭಗವಂತ ದಯಪಾಲಿಸಲಿ ಎಂದು ಶುಭ ಕೋರಿದ್ದಾರೆ.
ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ದೇವರು ತಮಗೆ ಆಯುಷ್ಯ, ಆರೋಗ್ಯವನ್ನು ಕರುಣಿಸಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವಿಟರ್ ಮೂಲಕ ಶುಭಾಷಯ ಕೋರಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ, ಉತ್ತಮ ಆರೋಗ್ಯ ಮತ್ತು ಆಯುಷ್ಯ ನಿಮಗೆ ದೇವರು ದಯಪಾಲಿಸಲಿ. ಅದೇ ರೀತಿ ಜನರಿಗೆ ನೀವು ನೀಡಿರುವ ಆಶ್ವಾಸನೆ ಈಡೇರಿಸುವ ಶಕ್ತಿ ನಿಮಗೆ ದೊರೆಯಲಿ ಎಂದು ಶುಭ ಕೋರಿದ್ದಾರೆ.
ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಟ್ವಿಟ್ಟರ್ ಮೂಲಕ ಪ್ರಧಾನಿಗೆ ಶುಭಾಷಯ ಕೋರಿದ್ದು, ಪ್ರೀತಿಯ ಪ್ರಧಾನಿಯವರಿಗೆ ಹುಟ್ಟುಹಬ್ಬದ ಶುಭಾಷಯಗಳು. ದೇವರು ನಿಮಗೆ ಆಯುರಾರೋಗ್ಯ ನೀಡಲಿ.ಪ್ರಗತಿಪರ ಮತ್ತು ಅಭಿವೃದ್ಧಿಪರ ದೇಶ ನಿರ್ಮಾಣ ಮಾಡಲು ಶಕ್ತಿ ದೊರೆಯಲಿ ಎಂದು ಶುಭ ಕೋರಿದ್ದಾರೆ.