ರಸ್ತೆ-ಸೇತುವೆಗಳ ಸುಧಾರಣೆಗೆ ಅಥೆಂಡಿಕ್ಸ್-ಇ ಕಾಮಗಾರಿ: 1700 ಕೋಟಿ ವೆಚ್ಚ

ಬೆಂಗಳೂರು, ಸೆ.17- ರಾಜ್ಯದ ರಸ್ತೆ ಮತ್ತು ಸೇವೆಗಳ ಅಥೆಂಡಿಕ್ಸ್-ಇ ಕಾಮಗಾರಿಗಳನ್ನು ಮುಂದುವರೆಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, 1764.32ಕೋಟಿ ರೂ.ವೆಚ್ಚದ ಕಾಮಗಾರಿಗಳನ್ನು ಮುಂದುವರೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.
ಕಳೆದ 2017-18ನೇ ಸಾಲಿನ ಆಯವ್ಯಯದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1764.32 ಕೋಟಿ ರೂ.ವೆಚ್ಚದಲ್ಲಿ ವಿವಿಧ ರಸ್ತೆ, ಸೇತುವೆ ಕಾಮಗಾರಿಗಳನ್ನು ಕೈಗೊಳ್ಳಲು ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿತ್ತು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅನುಮೋದನೆ ನೀಡಲು ವಿಳಂಬವಾಗಿತ್ತು. ಆದರೆ, ಈ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಮುಂದವರೆಸಲು ತೀರ್ಮಾನಿಸಲಾಗಿದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಲು ತೀರ್ಮಾನಿಸಿದೆ ಎಂದರು.
ಒಟ್ಟು 859 ಕಾಮಗಾರಿಗಳನ್ನು ಕೈಗೊಳ್ಳಲು ಇಲಾಖೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. 5427.50 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ 1841 ರಸ್ತೆ ಮತ್ತು ಸೇತುವೆ ಕಾಮಗಾರಿಗಳನ್ನು 4905 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರ ರಸ್ತೆ ನಿಧಿಯಡಿಯಲ್ಲಿ ಮೊದಲ ಹಂತದಲ್ಲಿ 384 ಕಾಮಗಾರಿಗಳನ್ನು 2327ಕೋಟಿ ರೂ.ವೆಚ್ಚದಲ್ಲಿ ಕೈಗೊಂಡಿದ್ದು, ಪ್ರಗತಿಯಲ್ಲಿದೆ.ಎರಡನೇ ಹಂತದಲ್ಲಿ 183 ಕಾಮಗಾರಿಗಳನ್ನು 1262 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ಒಟ್ಟಾರೆ ಕೇಂದ್ರ ರಸ್ತೆ ನಿಧಿ ವತಿಯಿಂದ 3589 ಕೋಟಿ ರೂ.ವೆಚ್ಚದಲ್ಲಿ 567 ಕಾಮಗಾರಿಗಳನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರ ವಾರ್ಷಿಕ 500 ಕೋಟಿ ರೂ.ಮಾತ್ರ ನೀಡುತ್ತಿದೆ.ಇದರಿಂದ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿಲ್ಲ ಎಂದು ಹೇಳಿದರು.

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ 3573.87 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಯನ್ನು 2996.60 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದ್ದು, ಬಾಕಿ ಇರುವ 264.49 ಕಿ.ಮೀ. ಉದ್ದ ರಸ್ತೆ ಕಾಮಗಾರಿಯನ್ನು 957.44 ಕೋಟಿ ರೂ.ವೆಚ್ಚದಲ್ಲಿ ಮುಂದಿನ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಅಂಕಿ-ಅಂಶ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಎಸ್‍ಎಚ್‍ಡಿಟಿ-4ರ ಅಡಿಯಲ್ಲಿ 2720 ಕಿ.ಮೀ. ಉದ್ದದ ರಸ್ತೆ ಸುಧಾರಣೆಯನ್ನು ಮೂರವರೆ ಸಾವಿರ ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
ರಾಜ್ಯ ಪೆÇಲೀಸ್ ಮಹಾರ್ದೇಶಕರಿಂದ ಸ್ವೀಕೃತವಾಗಿರುವ ಮಾಹಿತಿಯಂತೆ ರಾಜ್ಯ ಹೆದ್ದಾರಿಗಳಲ್ಲಿ 100 ಅಪಘಾತ ಸ್ಥಳಗಳು, ಜಿಲ್ಲಾ ಮುಖ್ಯ ರಸ್ತೆಯಲ್ಲಿ 68 ಅಪಘಾತ ಸ್ಥಳಗಳನ್ನು ಗುರುತಿಸಿ ರಸ್ತೆ ಸರುಕ್ಷತಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ