ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಮುಂಬೈನ ಬಾಂದ್ರಾ ಕೌಂಟುಬಿಕ ನ್ಯಾಯಾಲಯದಲ್ಲಿ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿಯವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
2012ರಲ್ಲಿ ಶೀನಾ ಬೋರಾ ಅವರನ್ನು ಕಾರೊಂದರಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಲಾಗಿತ್ತು. ನಂತರ ಮೃತದೇಹವನ್ನು ಅರಣ್ಯ ಪ್ರದೇಶವೊಂದರಲ್ಲಿ ಸುಟ್ಟು ಹಾಕಲಾಗಿತ್ತು. ಪ್ರಕರಣ ಸಂಬಂಧ ಇಂದ್ರಾಣಿ ಹಾಗೂ ಪೀಟರ್ ಮುಖರ್ಜಿ ಜೈಲು ಅನುಭವಿಸುತ್ತಿದ್ದಾರೆ.