ಸಚಿವ ಡಿಕೆಶಿ ವಿರುದ್ಧ ಎಫ್ ಐಆರ್ ದಾಖಲು: ಬಂಧತ ಭೀತಿ

ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹಾಗೂ ಅವರ ಸಹವರ್ತಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಎಫ್ ಐ ಆರ್ ದಾಖಲಿಸಿದ್ದು, ಸಚಿವ ಡಿ ಕೆ ಶಿವಕುಮಾರ್ ಅವರಿಗೆ ಮತ್ತೆ ಬಂಧನ ಭೀತಿ ಆರಂಭವಾಗಿದೆ.

ದೆಹಲಿಯ ಅಪಾರ್ಟ್​ವೆುಂಟ್​ನಲ್ಲಿ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದ 8.59 ಕೋಟಿ ರೂ.ಗೆ ಸಂಬಂಧಿಸಿದಂತೆ ತೆರೆಗೆ ಅಧಿಕಾರಿಗಳು ಜಾರಿನಿರ್ದೇಶನಾಲಯಕ್ಕೆ ಪ್ರಕರಣ ವರ್ಗಾಯಿಸಿದ್ದರು. ಈಗ ಇಡಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ಶಿವಕುಮಾರ್ ಹಾಗೂ ಅವರ ಸಹಚರರಾದ ಸಚಿನ್ ನಾರಾಯಣ್, ಶರ್ಮ ಟ್ರಾವೆಲ್ಸ್ ನ ಸುನೀಲ್ ಕುಮಾರ್ ಶರ್ಮ, ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ ಮತ್ತು ರಾಜ್ಯ ಸರಕಾರದ ನಿವೃತ್ತ ಸಿಬ್ಬಂದಿ ರಾಜೇಂದ್ರ ಅವರನ್ನು ಆರೋಪಿಯನ್ನಾಗಿಸಿ ಕೇಸ್ ದಾಖಲಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿದ್ದರಿಂದ ಡಿಕೆಶಿಗೆ ಮತ್ತೆ ಬಂಧನದ ಭೀತಿ ಎದುರಾಗಿದ್ದು, ಹಿರಿಯ ವಕೀಲರ ಜೊತೆ ಕಾನೂನು ಪ್ರಕ್ರಿಯೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಒಂದು ವೇಳೆ ವಿಚಾರಣೆಗಾಗಿ ಡಿ ಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿದರೆ ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ ಕೊಡಬೇಕಾಗುತ್ತದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದರಿಂದ ಡಿಕೆಶಿ ನಿರಾಳರಾಗಿದ್ದರು. ಆದರೀಗ ಮತ್ತೆ ಡಿಕೆಶಿ ಬಂಧನ ಭೀತಿಗೆ ಸಿಲುಕಿದ್ದಾರೆ.

ದೆಹಲಿ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಸಿಕ್ಕ ಹಣದ ಸಂಬಂಧ ಆದಾಯ ತೆರಿಗೆ ಇಲಾಖೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿತ್ತು. ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿದ್ದಾರೆ. ಹವಾಲ ಹಣದ ಮೂಲಕ ಕೋಟಿ ಕೋಟಿ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಗೆ ಡಿಕೆ ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ