ಸಿಎಂ ಕೇಜ್ರಿವಾಲ್ ಸೇರಿದಂತೆ 11 ಆಪ್ ಶಾಸಕರಿಗೆ ಸಮನ್ಸ್

ನವದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ಅನ್ಷು ಪ್ರಕಾಶ್ ಮೇಲೆ ಹಲ್ಲೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 11 ಆಪ್ ಶಾಸಕರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲಿ ಫೆಬ್ರುವರಿ 19ರ ರಾತ್ರಿ ಸಭೆ ಕರೆಯಲಾಗಿತ್ತು. ಈ ವೇಳೆ ಎಎಪಿ ಶಾಸಕರು ಪ್ರಕಾಶ್ ಮೇಲೆ ಹಲ್ಲೆ ನಡೆಸಿದ್ದರು.

ದೆಹಲಿ ಪೊಲೀಸರು ಆ.13ರಂದು ಸಲ್ಲಿಸಿದ 3000 ಸಾವಿರ ಪುಟಗಳ ಆರೋಪಪಟ್ಟಿಯ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮಾಜಿಸ್ಟ್ರೇಟ್ ಸಮರ್ ವಿಶಾಲ್ ಸಮನ್ಸ್ ಜಾರಿ ಮಾಡಿದ್ದಾರೆ.

ಈ ಹಲ್ಲೆಯ ಆರೋಪ ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಎಎಪಿ ಮುಖಂಡರಾದ ಅಮಾನತುಲ್ಲಾ ಖಾನ್, ಪ್ರಕಾಶ್ ಜರ್ವಾಲ್, ನಿತಿನ್ ತ್ಯಾಗಿ, ರಿತುರಾಜ್ ಗೋವಿಂದ, ಸಂಜೀವ್ ಜಾ, ಅಜಯ್ ದತ್, ರಾಜೇಶ್ ರಿಶಿ, ರಾಜೇಸ್ ಗುಪ್ತಾ, ಮದನ್ ಲಾಲ್, ಪ್ರವೀಣ್ ಕುಮಾರ್ ಮತ್ತು ದಿನೇಶ್ ಮೊಹನಿಯಾ ಹೆಸರುಗಳು ದೋಷಾರೋಪಪಟ್ಟಿಯಲ್ಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ