ಬೆಂಗಳೂರು, ಸೆ.18- ಬಿಜೆಪಿಯ ಕನಸು ಈಡೇರುವುದಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಆಡಳಿತ ಪೂರೈಸಲಿದ್ದಾರೆ ಎಂದು ಸಣ್ಣನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಇಂದಿಲ್ಲಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸು ಕಾಣುತ್ತಿರುವ ಬಿಜೆಪಿ ಆಸೆ ಈಡೇರುವುದಿಲ್ಲ ಎಂದು ತಿಳಿಸಿದರು.
ಕೆಲವು ಮಾಧ್ಯಮದವರು ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸುವುದನ್ನು ಕೈ ಬಿಡಬೇಕು. ನಿರಂತರವಾಗಿ ಭಿನ್ನಮತ ಭಿನ್ನಮತ ಎಂದು ಬಿತ್ತರಿಸುವುದನ್ನು ಕೈ ಬಿಡಬೇಕು. ಎಚ್.ಡಿ.ಕುಮಾರಸ್ವಾಮಿ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಕ್ಕಿಂತ ಈಗ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಅವುಗಳನ್ನು ತೋರಿಸುವುದನ್ನು ಬಿಟ್ಟು ಕಾಲೆಳೆಯುವುದನ್ನೇ ಮಾಧ್ಯಮಗಳು ಮಾಡುತ್ತಿವೆ. ಒಳ್ಳೆಯ ಕೆಲಸವನ್ನು ಬಿಂಬಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಣ್ಣ ನೀರಾವರಿ ಸಚಿವನಾಗಿ ನಾನು ರಾಜ್ಯಾದ್ಯಂತ ನಾನು ಪ್ರವಾಸ ಮಾಡಿದ್ದೇನೆ. ಮುಖ್ಯಮಂತ್ರಿಯವರು ರೈತರ ಸಾಲ ಮನ್ನಾ ಸೇರಿದಂತೆ ಹಲವು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಇವ್ಯಾವುದನ್ನೂ ಫೆÇೀಕಸ್ ಮಾಡುವುದಿಲ್ಲ ಎಂದರು.