ಬೆಂಗಳೂರು, ಸೆ.18- ವಕೀಲರಿಗೆ ಆರೋಗ್ಯ ವಿಮೆ, ಯುವ ವಕೀಲರಿಗೆ ಪೆÇ್ರೀ ಧನ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತು, ವಕೀಲರಿಗೆ ನೀಡುತ್ತಿರುವ ಕಲ್ಯಾಣÀ ನಿಧಿ, ವಾರ್ಷಿಕ ಅನುದಾನ ಹೆಚ್ಚಿಸುವುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆ ಸಂಬಂಧ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಹಿನ್ನೆಲೆಯಲ್ಲಿ ಇದೇ 22ರಂದು ಹೈಕೋರ್ಟ್ನ ವಕೀಲರ ಸಂಘದ ಆವರಣದಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ.
ವಕೀಲರ ಸಂಘದ ವತಿಯಿಂದ ಸಮಾವೇಶವನ್ನು ಆಯೋಜಿಸಿದ್ದು, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಸ್.ಅಬ್ದುಲ್ ನಜೀರ್ ಸಮಾವೇಶ ಉದ್ಘಾಟಿಸಲಿದ್ದು, ಹೈಕೋರ್ಟ್ ನ್ಯಾಯಮೂರ್ತಿಗಳು, ರಾಜ್ಯ ಕಾನೂನು ಸಚಿವರು ಹಾಗೂ ಅಡ್ವೋಕೇಟ್ ಜನರಲ್ ಇನ್ನಿತರೆ ಗಣ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ವಕೀಲರ ವೃತ್ತಿಗೆ ಸಂಬಂಧಪಟ್ಟಂತೆ ಹಲವಾರು ಸಮಸ್ಯೆಗಳು, ವಕೀಲರ ಸಂಘಗಗಳು ಎದುರಿಸುತ್ತಿರುವ ಹಲವಾರು ಸಮಸ್ಯೆಗಳು, ಟೋಲ್ಗಳಲ್ಲಿ ವಕೀಲರ ವಾಹನಗಳಿಗೆ ಶುಲ್ಕ ವಿನಾಯಿತಿ, ನ್ಯಾಯಾಲಯದ ಆವರಣಗಳಲ್ಲಿ ಮೂಲಭೂತ ಸೌಕರ್ಯಗಳು ಮುಂತಾದ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.