ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ವಸತಿ ಶಾಲೆಯ ಮಾನ್ಯತೆ ರದ್ದು ಪಡಿಸಲು ಸೂಚನೆ

ಡೆಹ್ರಾಡೂನ್: ವಿದ್ಯಾರ್ಥಿನಿ ಮೇಲೆ ನಾಲ್ವರು ಸಹಪಾಠಿಗಳು ವಸತಿ ಶಾಲೆಯಲ್ಲಿಯೇ ಅತ್ಯಾಚಾರ ಮಾಡಿದ್ದ ಪ್ರಕರಣದ ಸಂಬಂಧ ವಸತಿ ಶಾಲೆಯ ಮಾನ್ಯತೆ ರದ್ದುಗೊಳಿಸುವಂತೆ ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಶಾಲಾ ಶಿಕ್ಷಣ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ ಶಾಲಾ ಸಿಬ್ಬಂದಿ ಈ ಪ್ರಕರಣದಲ್ಲಿ ನಾಲ್ವರು ವಿದ್ಯಾರ್ಥಿಗಳೊಂದಿಗೆ ಸೇರಿ ಬಾಲಕಿಯ ಗರ್ಭಪಾತ ಮಾಡಿಸಿ, ಸಾಕ್ಷ್ಯನಾಶ ಮಾಡಿದ್ದಾರೆ ಎಂದು ಉಲ್ಲೇಖಿಸಿದೆ.

ನಾಲ್ವರು ಆರೋಪಿಗಳನ್ನೂ ಪೊಲೀಸರು ವಶ ಪಡೆದಿದ್ದಾರೆ. ಶಾಲೆಯ ನಿರ್ದೇಶಕಿ ಲತಾ ಗುಪ್ತ, ಪ್ರಾಂಶುಪಾಲ ಜಿತೇಂದ್ರ ಶರ್ಮ, ಆಡಳಿತಾಧಿಕಾರಿ ದೀಪಕ್​ ಮಲ್ಹೋತ್ರ, ಆತನ ಪತ್ನಿ ತನು ಮಲ್ಹೋತ್ರ ಮತ್ತು ವಸತಿ ಶಾಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಮಂಜು ಸಾಕ್ಷ್ಯ ನಾಶದಲ್ಲಿ ಭಾಗಿಯಾಗಿದ್ದು ಎಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ