ಜೆಟ್ ಏರ್ ವೇಸ್ ವಿಮಾನದಲ್ಲಿ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಕಿವಿ-ಮೂಗಿನಲ್ಲಿ ರಕ್ತಸ್ರಾವ

ಮುಂಬೈ: ಜೆಟ್ ಏರ್ ವೇಸ್ ವಿಮಾನ ಸಿಬ್ಬಂದಿಯ ಎಡವಟ್ಟಿನಿಂದಾಗಿ ಪ್ರಯಾಣಿಕರು ಸಂಕಷ್ಟಕ್ಕೀಡಾಗಿ ಮುಂಬೈಯಿಂದ ಜೈಪುರ್ ಗೆ ಹಾರಾಟ ನಡೆಸಿದ್ದ ವಿಮಾನ ಮತ್ತೆ ವಾಪಸ್ ಮುಂಬೈ ನಿಲ್ದಾಣಕ್ಕೆ ಆಗಮಿಸಿದ ಘಟನೆ ನಡೆದಿದೆ.

ಬೊಯಿಂಗ್​ 737 ಜೆಟ್​ ಏರ್​​ವೇಸ್​ ವಿಮಾನ ಇಂದು ಬೆಳಿಗ್ಗೆ ಮುಂಬೈನಿಂದ ಜೈಪುರ್ ಗೆ ಹಾರಾಟ ನಡೆಸಿದೆ. ವಿಮಾನ ಸಿಬ್ಬಂದಿ ವಿಮಾನದ ಸಿಬ್ಬಂದಿ ಹಾರಾಟದ ಆರಂಭದಲ್ಲಿ ಕ್ಯಾಬಿನ್ ಒತ್ತಡ ಸಮಸ್ಯೆಯನ್ನು ನಿಯಂತ್ರಿಸದೆ ಇದ್ದ ಕಾರಣ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಒತ್ತಡವನ್ನು ತಡೆಯಲಾಗದೆ ತಲೆನೋವು ಕಾಣಿಸಿಕೊಂಡಿತು ಇದರಿಂದ ಮೂಗು ಮತ್ತು ಕಿವಿಯಲ್ಲಿ ರಕ್ತಸ್ರಾವವಾಗಲು ಆರಂಭವಾಗಿದೆ.

ಪ್ರಯಾಣಿಕರು ಅಸ್ವಸ್ಥರಾಗುತ್ತಿದ್ದಂತೆ ಪ್ರಯಾಣಿಕರಿಗೆ ಆಕ್ಸಿಜನ್ ಮುಖವಾಡ ನೀಡಲಾಯಿತು. ತಕ್ಷಣ ವಿಮಾನವನ್ನು ಮತ್ತೆ ಮುಂಬೈ ನಿಲ್ದಾಣಕ್ಕೆ ತಿರುಗಿಸಲಾಗಿದೆ. ಸಧ್ಯ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಜೆಟ್ ಏರ್ ವೇಸ್ ವಿಮಾನದಲ್ಲಿ ಆದ ದುರ್ಘಟನೆಗೆ ತುರ್ತು ಸ್ಪಂದಿಸಿರುವ ನಾಗರಿಕ ವಿಮಾನಯಾನ ಸಚಿವಾಲಯ, ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶಕರಿಗೆ ಮನವಿ ಮಾಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ