ಬೆಂಗಳೂರು, ಸೆ.20- ಅಕ್ಟೋಬರ್ 3ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಎಸ್.ಎ.ವೇಣುಗೋಪಾಲ್, ಮಾರ್ಗರೇಟ್ ಆಳ್ವ ಅವರ ಪುತ್ರ ನಿವೇದಿತಾ ಆಳ್ವ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಉಳಿದ ಇಬ್ಬರು ಅಭ್ಯರ್ಥಿಗಳ ಆಯ್ಕೆ ಬಗ್ಗೆ ನವದೆಹಲಿಯಲ್ಲಿ ಚರ್ಚೆ ಮುಂದುವರಿದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮುಂತಾದವರ ಜತೆ ಅಹಮ್ಮದ್ ಪಟೇಲ್, ಗುಲಾಮ್ ನಬಿ ಆಜಾದ್, ವೇಣುಗೋಪಾಲ್ ಅವರು ಚರ್ಚೆ ನಡೆಸಿದ್ದಾರೆ.
ಬರಗೂರು ರಾಮಚಂದ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ, ಚನ್ನಾರೆಡ್ಡಿ, ಮುಖ್ಯಮಂತ್ರಿ ಚಂದ್ರು ಅವರ ಹೆಸರುಗಳು ಕೇಳಿಬಂದಿವೆ. ಇಬ್ಬರ ಹೆಸರುಗಳನ್ನು ಅಂತಿಮಗೊಳಿಸಲಾಗಿದ್ದು, ಉಳಿದ ಇಬ್ಬರ ಆಯ್ಕೆ ಕಸರತ್ತು ಮುಂದುವರಿದಿದ್ದು, ಸಂಜೆಯೊಳಗೆ ಅಂತಿಮಗೊಳ್ಳಲಿದೆ.