ಜನರೇ ದಂಗೆ ಏಳಲಿದ್ದಾರೆ; ಸಿಎಂ

ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮತ್ತು ಶಾಸಕರನ್ನು ಖರೀದಿಸುವ ಪ್ರಯತ್ನವನ್ನು ಬಿಜೆಪಿ ಕೈಬಿಡದಿದ್ದರೆ ಜನರೇ ದಂಗೆ ಏಳಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪಾಪದ ಹಣದಿಂದ ಶಾಸಕರನ್ನು ಖರೀದಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆಡಳಿತ ಸುಗಮವಾಗಿ ನಡೆಸದಂತೆ ಅಡ್ಡಿ ಮಾಡಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಇದೇ ರೀತಿ ಅವರು ಮುಂದುವರಿದರೆ ಜನರೇ ಬಿಜೆಪಿಯವರ ವಿರುದ್ಧ ದಂಗೆ ಏರಳಲಿದ್ದಾರೆ ಅಥವಾ ನಾವೇ ದಂಗೆ ಏಳುವಂತೆ ಜನರಿಗೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತರ ಸಾಲ ಮನ್ನಾ ಮಾಡಲು ಭಾರಿ ಒತ್ತಡವಿತ್ತು. ಈ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಸಾಲ ಪಡೆದಿರುವ ರೈತರ ವಿವರ ನೀಡುವಂತೆ ನಿನ್ನೆ ನೋಡಲ್ ಅಧಿಕಾರಿಗಳಿಂದ ಮಾಹಿತಿ ಕೇಳಲಾಗಿದೆ. ನಾವು ಈ ಕೆಲಸದಲ್ಲಿ ನಿರತರಾಗಿದ್ದರೆ ಬಿಜೆಪಿಯವರು ಸರ್ಕಾರವನ್ನು ಉರುಳಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಗುಡುಗಿದರು.
ಭೂಗತ ಮಾಫಿಯಾ ಒಂದೊಂದೇ ಹೊರಗೆ ಬರುತ್ತಿದೆ. ಕಿಂಗ್‍ಪಿನ್ ಒಬ್ಬ ಶ್ರೀಲಂಕಾಕ್ಕೆ ಪರಾರಿಯಾಗಿದ್ದಾನೆ. ಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ವೇಳೆ ಸರ್ಕಾರ ನಿಷ್ಕಿಯವಾಗಿದ್ದರೆ ಕಿಂಗ್‍ಪಿನ್‍ಗಳು ಪರಾರಿಯಾಗಬೇಕಿತ್ತು ಎಂದು ಪ್ರಶ್ನಿಸಿದ ಅವರು, ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರು ಭ್ರಮಾಲೋಕದಲ್ಲಿ ಇದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ