ಸಿಎಂ ಕುಮಾರಸ್ವಾಮಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್  ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ ಏಳಬೇಕು ಎಂದು ಹೇಳಿಕೆ ನೀಡಿದ್ದ  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಿಯೋಗ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ಸಲ್ಲಿಸಿದೆ.

ಸಂಸದೆ ಶೋಭಾ ಕರಂದ್ಲಾಜೆ ನೈತೃತ್ವದ ನಿಯೋಗ ಡಿಜಿಪಿ ಕಚೇರಿಗೆ ಆಗಮಿಸಿ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಗೋವಿಂದ ಕಾರಜೋಳ, ಸಿ.ಎಂ.ಉದಾಸಿ, ತೇಜಸ್ವಿನಿ ಗೌಡ , ಆಯನೂರು ಮಂಜುನಾಥ್‌, ಹರತಾಳು ಹಾಲಪ್ಪ ಮೊದಲಾದವರು ನಿಯೋಗದಲ್ಲಿದ್ದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ