ದಾಬೋಲ್ಕರ್ ಹತ್ಯೆ ಆರೋಪಿ ಎಸ್‍ಐಟಿ ವಶಕ್ಕೆ

ಬೆಂಗಳೂರು, ಸೆ.21 ಮಹಾರಾಷ್ಟ್ರದಲ್ಲಿ ನಡೆದ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಶರತ್ ಕಲಸ್ಕರ್‍ನನ್ನು ಎಸ್‍ಐಟಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‍ಐಟಿ ತಂಡ ಮಹಾರಾಷ್ಟ್ರದ ಎಟಿಎಸ್ ವಶದಲ್ಲಿದ್ದ ಆರೋಪಿ ಕಲಸ್ಕರ್ ನನ್ನು ವಿಚಾರಣೆಗಾಗಿ 20 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.

ಮುಂಬೈನಲ್ಲಿ ಎಟಿಎಸ್ ದಾಳಿ ವೇಳೆ ಶರದ್ ಕಲಾಸ್ಕರ್ ಬಳಿ 19 ಪಿಸ್ತೂಲ್ ಜಪ್ತಿಯಾಗಿತ್ತು. ಜಪ್ತಿಯಾದ ಪಿಸ್ತೂಲ್‍ಗಳಲ್ಲಿ ಎರಡನ್ನು ಗೌರಿ ಹತ್ಯೆಗೆ ಬಳಸಿರುವ ಶಂಕೆ ವ್ಯಕ್ತವಾಗಿತ್ತು.

ಗೌರಿ ಹತ್ಯೆಗೆ ಬಳಸಿರುವ ಪಿಸ್ತೂಲ್ ಹಿಂದೆ ಕಲಾಸ್ಕರ್ ಕೈವಾಡ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‍ಐಟಿ ಪೆÇಲೀಸರು ಶರದ್ ಕಲಾಸ್ಕರನನ್ನು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.
ಈಗಾಗಲೇ ಗೌರಿ ಲಂಕೇಶ್ ಕೇಸ್‍ನಲ್ಲಿ ಎಸ್‍ಐಟಿ ಪೆÇಲೀಸರ ವಶದಲ್ಲಿದ್ದ ಮತ್ತೊಬ್ಬ ಆರೋಪಿ ಸುಧನ್ವ ಗೋಂಧಲೇಕರ್‍ನನ್ನು ಮತ್ತೆ 10 ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ. ಗುರುವಾರ ಸುಧನ್ವ ಗೋಂಧಲೇಕರ್ ಪೆÇಲೀಸ್ ಕಸ್ಟಡಿ ಅಂತ್ಯವಾಗಿತ್ತು. ಹಾಗಾಗಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಎಸ್‍ಐಟಿ ಪೆÇಲೀಸರು, ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಶಿವಸೇನೆ ಪಕ್ಷದ ಮಾಜಿ ಕಾಪೆರ್Çೀರೇಟರ್ ಶ್ರೀಕಾಂತ್ ಪನ್ಗಾರ್ಕರ್ ಎಂಬಾತನನ್ನು ಪೆÇಲೀಸರು ಬೆಂಗಳೂರಿಗೆ ಕರೆ ತಂದಿದ್ದಾರೆ. ವಿಚಾರವಾದಿಗಳು ಮತ್ತು ಚಿಂತಕರ ಹತ್ಯೆಗೆ ಶ್ರೀಕಾಂತ್ ಹಣಕಾಸು ಸಹಾಯ ಮಾಡುತ್ತಿದ್ದನು ಎಂಬ ಆರೋಪಗಳಿವೆ. ಹೀಗಾಗಿ ಶ್ರೀಕಾಂತ್‍ನನ್ನು ಪುಣೆಯ ಎಸ್‍ಐಟಿ ಪೆÇಲೀಸರು ಬಂಧಿಸಿ ಮುಂಬೈ ಜೈಲಿನಲ್ಲಿ ಇರಿಸಿದ್ದರು. ಬಾಡಿ ವಾರೆಂಟ್ ಮೂಲಕ ಬೆಂಗಳೂರು ಎಸ್‍ಐಟಿ ಪೆÇಲೀಸರು ಆತನನ್ನು ಕರ್ನಾಟಕಕ್ಕೆ ಕರೆ ತಂದು ವಿಚಾರಣೆ ನಡೆಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ