ಪರಿಸರ ಸ್ನೇಹಿ ಗಣಪತಿಗಾಗಿ ಯಕ್ಷಗಾನದ ಮೂಲಕ ಸಾರ್ವಜನಿಕರಿಗೆ ಅರಿವು

ಬೆಂಗಳೂರು, ಸೆ.22- ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪನೆ ಮಾಡುವ ಕುರಿತಂತೆ ಯಕ್ಷಗಾನದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಗಾನಸೌರಭ ಯಕ್ಷಗಾನ ಶಾಲೆಯ ಕಲಾವಿದರು ಹಾಗೂ ಅತಿಥಿ ಕಲಾವಿದರು ನಗರದ ಕೆನರಾಬ್ಯಾಂಕ್ ಕಾಲೋನಿ, ನಾಗರಬಾವಿ ಮತ್ತು ವರ್ತೂರಿನಲ್ಲಿ ಯಕ್ಷಗಾನದ ಮೂಲಕ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆ ಬಗ್ಗೆ ಅರಿವು ಮೂಡಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಡಾ.ಬೇಗಾರ್ ಶಿವಕುಮಾರ್ ನಿರ್ದೇಶನದಲ್ಲಿ ಯಕ್ಷಗಾನ ಕಲಾವಿದರು ಪರಿಸರ ಸ್ನೇಹಿ ಗಣೇಶನ ಬಗ್ಗೆ ನಡೆಸಿಕೊಟ್ಟ ಯಕ್ಷಗಾನ ಸಾರ್ವಜನಿಕರ ಮೆಚ್ಚುಗೆ ಗಳಿಸಿತು.
ಮುಖ್ಯ ಪರಿಸರ ಅಧಿಕಾರಿ ಕುಮಾರಸ್ವಾಮಿ, ಹಿರಿಯ ಅಧಿಕಾರಿ ಮಹಮ್ಮದ್ ಬೇಗ್, ಗ್ರಂಥಪಾಲಕ ಮಹೇಶ್ ಮತ್ತಿತರರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ