ಹಾಸನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

ಹಾಸನ: ಹಾಸನ ಹಾಲು ಒಕ್ಕೂಟದ ವತಿಯಿಂದ 556.20ಕೋಟಿ ರೂ ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚಾಲನೆ
ನೀಡಿದರು.

ಹಾಸನ ಹಾಲು ಒಕ್ಕೂಟ ವತಿಯಿಂದ ರೂ 556.20 ಕೋಟಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನೂತನ ಐಸ್ ಕ್ರೀಂ ಉತ್ಪಾದನಾ ಘಟಕದ ಉದ್ಘಾಟನೆ, ರೂ. 279 ಕೋಟಿ ವೆಚ್ಚದಲ್ಲಿ ಮೆಗಾ ಡೈರಿ ಮತ್ತು ಹಾಲಿನಪುಡಿ ಘಟಕ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆ, ರೂ.136 ಕೋಟಿ ವೆಚ್ಚದಲ್ಲಿ ಯು.ಹೆಚ್.ಟಿ. ಸುವಾಸಿತ ಹಾಲಿನ ಪೆಟ್ ಬಾಟಲ್ ಘಟಕ ನಿರ್ಮಾಣದ ಶಂಕುಸ್ಥಾಪನೆ, ರೂ.67 ಕೋಟಿ ವೆಚ್ಚದಲ್ಲಿ ಯು.ಹೆಚ್.ಟಿ. ಘಟಕದ ಉತ್ಪಾದನಾ ಸಾಮಥ್ರ್ಯ 2 ರಿಂದ 4 ಲಕ್ಷ ಲೀಗಳಿಗೆ ವಿಸ್ತರಣೆಗೆ ಶಂಕುಸ್ಥಾಪನೆ ನೆರವೇರಿಸಿದರು.

ಇನ್ನು ರೂ. 23 ಕೋಟಿ ವೆಚ್ಚದಲ್ಲಿ ಹಾಸನ ಡೈರಿ ಸಂಸ್ಕರಣಾ ಸಾಮಥ್ರ್ಯ 3 ರಿಂದ 5 ಲಕ್ಷ ಲೀ.ಗಳಿಗೆ ವಿಸ್ತರಣೆಗೆ ಶಂಕುಸ್ಥಾಪನೆ, ರೂ.4.5 ಕೋಟಿ ವೆಚ್ಚದಲ್ಲಿ ಎಸ್.ಎಂ.ಒಇ ಗೋದಾಮು ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ, ರೂ. 4.8 ಕೋಟಿ ವೆಚ್ಚದಲ್ಲಿ ಉಗ್ರಾಣ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ, ರೂ. 3.5 ಕೋಟಿ ವೆಚ್ಚದಲ್ಲಿ ಆಡಳಿತ ಕಚೇರಿ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ, ರೂ. 1.4 ಕೋಟಿ ವೆಚ್ಚದಲ್ಲಿ ಉಪಹಾರ ಗೃಹ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ಮಾಡಿದರು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸೇರಿ ಹಲವು ಸಚಿವರು ಶಾಸಕರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ