ನಿಗಮ ಮಂಡಳಿಗಳ ಶೀಘ್ರ ನೇಮಕಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ

ಬೆಂಗಳೂರು, ಸೆ.24- ನಿಗಮ ಮಂಡಳಿಗಳ ನೇಮಕವನ್ನು ಶೀಘ್ರವಾಗಿ ಮಾಡಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೂಚಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಬಂಡೆಪ್ಪ ಕಾಶೆಂಪೂರ್ ಹಾಸನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದಲ್ಲಿ ದೇವೇಗೌಡರು ಈ ಸೂಚನೆ ನೀಡಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಂಘಟನೆ, ಲೋಕಸಭಾ ಚುನಾವಣೆ ಸಿದ್ಧತೆ ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳ ಚರ್ಚೆ ನಡೆದಿದ್ದು , ಈ ವೇಳೆ ನಿಗಮ ಮಂಡಳಿಗೆ ನೇಮಕ ಮಾಡುವಂತೆ ತಿಳಿಸಿದ್ದಾರೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ