ನವದೆಹಲಿ: 1999 ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಹತ್ಯೆಯೊಂದರ ಪ್ರಕರಣದ ಅಂತಿಮ ತೀರ್ಪು ಇನ್ನೂ ಬಾರದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಪ್ರಕರಣವನ್ನು ಮೀರತ್ ಕೋರ್ಟ್ನಿಂದ ದೆಹಲಿ ಕೋರ್ಟ್ಗೆ ಹಸ್ತಾಂತರ ಮಾಡಿದೆ.
ಕಳೆದ ಇಪ್ಪತ್ತು ವರ್ಷಗಳಲ್ಲಿ ಬರೋಬ್ಬರಿ 55 ಬಾರಿ ವಿಚಾರಣೆಯನ್ನು ಕೋರ್ಟ್ ಮುಂದೂಡಿಕೆ ಮಾಡಿತ್ತು. ಇದನ್ನು ಸುಪ್ರೀಂ ಗಂಭೀರವಾಗಿ ಪರಿಗಣಿಸಿದ್ದು, ತೀರ್ಪು ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಜಸ್ಟೀಸ್ ಬಿ.ಮದನ್ ಲೋಕುರ್, ತೀರ್ಪು ವಿಳಂಬವಾಗಿರುವುದಕ್ಕೆ ನ್ಯಾಯಾಧೀಶರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರ ತೀರ್ಪಿಗಾಗಿ ಪ್ರಕರಣವನ್ನು ಹಸ್ತಾಂತರ ಮಾಡಿ ಆದೇಶ ಹೊರಡಿಸಿದೆ.
ಸಂತ್ರಸ್ತ ಕುಟುಂಬ ತೀರ್ಪು ವಿಳಂಬವಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿ ಸುಪ್ರೀಂ ಮೆಟ್ಟಿಲೇರಿತ್ತು. ತೀರ್ಪಿನ ಕುರಿತಾಗಿ ಯಾವುದೇ ಭರವಸೆ ಇಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿತ್ತು. ಕೊಲೆ ಆರೋಪದಲ್ಲಿ ಹರೇಂದ್ರ ಹಾಗೂ ಸುರೇಂದ್ರ ಎಂಬ ಆರೋಪಿಗಳು ವಿಚಾರಣೆ ಎದುರಿಸುತ್ತಿದ್ದಾರೆ.