ತಿರುವನಂತಪುರಂ: ಮ್ಯೂಸಿಕ್ ಕಂಪೂಸರ್, ಗಾಯಕ ಬಾಲಭಾಸ್ಕರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಪರಿಣಾಮ ಬಾಲಭಾಸ್ಕರ್ ಹಾಗೂ ಪತ್ನಿಯ ಸ್ಥಿತಿ ಚಿಂತಾಜನಕವಾಗಿದ್ದು, 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ತಿರುವನಂತಪುರಂ ನಲ್ಲಿ ನಡೆದಿದೆ.
ಇಲ್ಲಿನ ಪಳ್ಳಿಪುರಂನಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಾಲಭಾಸ್ಕರ್ ಹಾಗೂ ಪತ್ನಿ ಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 2 ವರ್ಷದ ಮಗಳು ತೇಜಸ್ವಿನಿ ಸ್ಥಳದಲ್ಲೇ ಮೃತಪಟ್ಟಿದೆ.
ತ್ರಿಸೂರ್ ನಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ ಎಂದು ಮಂಗಳಪುರಂ ಠಾಣೆ ಪೊಲೀಸರು ತಿಳಿಸಿದ್ದಾರೆ.