
ಬೆಂಗಳೂರು, ಸೆ.25-ಕೆಲ ಸಂಘಟನೆಗಳು ಇದೇ 28 ರಂದು ಕರೆ ಕೊಟ್ಟಿರುವ ರಾಜ್ಯಾದ್ಯಂತ ಔಷಧಿ ಅಂಗಡಿಗಳ ಬಂದ್ಗೆ ಸುವರ್ಣ ಕರ್ನಾಟಕ ಕೆಮಿಸ್ಟ್ ಅಂಡ್ ಡಿಸ್ಟ್ರಿಬ್ಯೂಟರ್ ಅಸೋಸಿಯೇಷನ್ ಭಾಗವಹಿಸದಿರಲು ನಿರ್ಧರಿಸಿದೆ.
ಸಾರ್ವಜನಿಕರ ಹಾಗೂ ರೋಗಿಗಳ ಹಿತದೃಷ್ಟಿಯಿಂದ ಹಾಗೂ ಕರ್ನಾಟಕ ರಾಜ್ಯದ ಔಷಧ ನಿಯಂತ್ರಕರ ಮನವಿ ಮೇರೆಗೆ ಇದೇ 22 ರಂದು ನಡೆದ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿ 28 ರಂದು ನಡೆಯಲಿರುವ ಬಂದ್ನಲ್ಲಿ ಭಾಗವಹಿಸದಿರಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಎನ್.ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು.
ಕರ್ನಾಟಕ ಔಷಧ ವ್ಯಾಪಾರಿಗಳು ಎಂದಿನಂತೆ ಅಂಗಡಿಗಳನ್ನು ತೆರೆದು ಸಾರ್ವಜನಿಕರ ಆರೋಗ್ಯ ಸೇವೆಯಲ್ಲಿ ನಿರತರಾಗಿರುತ್ತಾರೆ ಎಂದು ಅವರು ಹೇಳಿದರು.