
ಮೈಸೂರು ಸೆ.26-ಗಲಾಟೆ ನಡೆದ ವಿಷಯಕ್ಕೆ ಬೇಸರಪಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ತೊಗರಿಬೀದಿಯ ಕ್ಷತ್ರಿಯ ರಸ್ತೆ ವಾಸಿ ಹೇಮಂತ್ಕುಮಾರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಹೇಮಂತ್ಕುಮಾರ್ ಜತೆ ಬಾರೊಂದರ ಬಳಿ ನಡೆದ ಗಲಾಟೆಯಿಂದ ಬೇಸರಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕೆ.ಆರ್.ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.