ಚೆನ್ನೈ: ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರ್ ಆಗಿ ನೆರೆಯ ರಾಜ್ಯ ತಮಿಳುನಾಡಿಗೆ ಭೇಟಿ ನೀಡಿದ್ದು, ಮೈತ್ರಿ ಸರ್ಕಾರ ಬೀಳಲಿದೆ ಎನ್ನುವ ಹಲವು ವದಂತಿಗಳ ನಡುವೆ ಹೆಚ್ಡಿಕೆ ತಮಿಳುನಾಡು ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
ತಮಿಳುನಾಡಿನ ತೂತುಕುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸರ್ಕಾರ ಬೀಳಲಿದೆ ಎನ್ನುವುದು ಕೇವಲ ವದಂತಿ, ಅಂತಹ ಯಾವುದೇ ಸಾಧ್ಯತೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕಾವೇರಿ ನೀರಿನ ವಿಚಾರದ ಕುರಿತಾಗಿ ಮಾತನಾಡಲು ನಿರಾಕರಿಸಿದ ಕುಮಾರಸ್ವಾಮಿ, ಆಪರೇಷನ್ ಕಮಲ ಯಾವುದೇ ಕಾರಣಕ್ಕೂ ನಡೆಯುವುದಿಲ್ಲ ಎಂದು ಕುಮಾರಸ್ವಾಮಿ ಭರವಸೆಯ ಮಾತುಗಳನ್ನಾಡಿದ್ದಾರೆ.