ಬೆಂಗಳೂರು, ಸೆ.27-ವಿಧಾನಸಭೆಯಿಂದ ವಿಧಾನಪರಿಷತ್ನ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳಾದ ನಸೀರ್ ಅಹಮ್ಮದ್, ಎಂ.ಸಿ.ವೇಣುಗೋಪಾಲ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಎಂ.ರಮೇಶ್ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಪರಿಷತ್ನ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನವಾಗಿತ್ತು. ಕೊನೆ ಘಳಿಗೆವರೆಗೂ ಯಾರೂ ನಾಮಪತ್ರ ವಾಪಸ್ ಪಡೆಯಲಿಲ್ಲ. ಚುನಾವಣಾ ಕಣದಲ್ಲಿ ಮೂರು ಮಂದಿ ಅಭ್ಯರ್ಥಿಗಳು ಮಾತ್ರ ಇದ್ದುದರಿಂದ ವಿಧಾನಪರಿಷತ್ನ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಜಂಟಿ ಕಾರ್ಯದರ್ಶಿ ಕುಮಾರಸ್ವಾಮಿಯವರು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಪ್ರಕಟಿಸಿದ್ದಾರೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ವಿ.ಸೋಮಣ್ಣ ವಿಧಾನಸಭೆಗೆ ಚುನಾಯಿತರಾಗಿದ್ದ ತೆರವಾಗಿದ್ದ ಮೂರೂ ಸ್ಥಾನಗಳಿಗೆ ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡಿತ್ತು.
ಬಿಜೆಪಿ ಕೊನೆ ಘಳಿಗೆಯಲ್ಲಿ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದರಿಂದ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು.