
ಬೆಂಗಳೂರು, ಸೆ.27-ಇನ್ನೆರಡು ದಿನಗಳ ಕಾಲ ನಗರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವುದರಿಂದ ತಗ್ಗುಪ್ರದೇಶಗಳಲ್ಲಿರುವ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಮಳೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಭಾರೀ ಮಳೆಯಿಂದ ಜನರಿಗಾಗುವ ತೊಂದರೆಗಳನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಈ ಸಂದರ್ಭದಲ್ಲಿ ಮಳೆ ಹಾನಿಗೆ ತುತ್ತಾಗುವ ಸಾಧ್ಯತೆಗಳಿರುವುದರಿಂದ ತಗ್ಗುಪ್ರದೇಶದ ಜನರು ಜಾಗೃತರಾಗಿರಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.