ಬೆಂಗಳೂರು, ಸೆ.27- ನಗರದಲ್ಲಿ ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ತೀವ್ರತರವಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಬ್ಬರು ದಕ್ಷ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಪೆÇಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 20 ಸರ್ಚ್ ವಾರೆಂಟ್ಗಳನ್ನು ಪಡೆದು 11 ತಂಡಗಳನ್ನ ರಚಿಸಿ 50 ರೌಡಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳಿದರು.
ರೌಡಿ ಚಟುವಟಿಕೆಗಳನ್ನು ನಿಯಂತ್ರಿಸಿ ಶಾಂತಿ, ಸುವ್ಯವಸ್ಥೆ ಕಾಪಾಡಬೇಕಾದ ಹಿನ್ನೆಲೆಯಲ್ಲಿ ದಕ್ಷ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಪರಾಧ ವಿಭಾಗದ ಹೆಚ್ಚುವರಿ ಪೆÇಲೀಸ್ ಆಯುಕ್ತರಾಗಿ ಅಲೋಕ್ಕುಮಾರ್ ಮತ್ತು ಸಿಸಿಬಿ ಡಿಸಿಪಿಯಾಗಿ ಗಿರೀಶ್ ಅವರನ್ನು ನೇಮಿಸಲಾಗಿದೆ.
ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ ವೇಳೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಸಿಕ್ಕಿರುವ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.