
ಬೆಂಗಳೂರು, ಸೆ.28- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಗಂಗಾಂಬಿಕೆ ಮಲ್ಲಿಕಾರ್ಜುನ್ ಮತ್ತು ಉಪಮೇಯರ್ ಆಗಿ ಆಯ್ಕೆಯಾಗಿರುವ ರಮಿಳಾ ಉಮಾಶಂಕರ್ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇದು ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟಕ್ಕೆ ಒಲಿದ ಗೆಲುವು ಎಂದು ಬಣ್ಣಿಸಿದರು.
ಈ ಗೆಲುವಿನಿಂದ ಮೈತ್ರಿ ಸರ್ಕಾರದ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಇದನ್ನು ಯಶಸ್ವಿಯಾಗಿ ನಿರ್ವಹಿಸುವ ಭರವಸೆ ನನಗಿದೆ ಎಂದು ಹೇಳಿದರು.