ಶರದ್ ಪವಾರ್ ನಡೆಗೆ ಬೇಸರ: ಎನ್ ಸಿಪಿ ತೊರೆದ ತಾರಿಖ್ ಅನ್ವರ್

ನವದೆಹಲಿ: ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ರಾಫೆಲ್ ಒಪ್ಪಂದದ ಕುರಿತು ಪ್ರಧಾನಿ ನರೇಂದ್ರ ಮೋದಿ ಪರ ನಿಂತಿರುವ ಹಿನ್ನಲೆಯಲ್ಲಿ ಆಕ್ರೋಶಗೊಂಡಿರುವ ಎನ್ ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್ ರಾಜೀನಾಮೆ ನೀಡಿದ್ದಾರೆ.

ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದರೆ ಇತ್ತ ಮಹಾಘಟಬಂಧದಲ್ಲಿ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದ ಶರದ್ ಪವಾರ್, ಪ್ರಧಾನಿಮೋದಿ ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ತಾರಿಖ್ ಅನ್ವರ್, ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ