
ನ್ಯೂಯಾರ್ಕ್: ಜಾಗತಿಕ ಮಟ್ಟದಲ್ಲಿ ಶಾಂತಿಗೆ ಭಯೋತ್ಪಾದನೆಯೊಂದೇ ಪ್ರಬಲ ಸವಾಲು ಎಂದು ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಪಾಕ್ ಜೊತೆಗಿನ ಮಾತುಕತೆ ಮುರಿದುಬಿದ್ದ ನಂತರದಲ್ಲಿ ಸುಷ್ಮಾ ಸ್ವರಾಜ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಸಾರ್ಕ್ ಒಕ್ಕೂಟದ ಸಭೆಯಲ್ಲಿ ಸುಷ್ಮಾ ಸ್ವರಾಜ್, ದಕ್ಷಿಣ ಏಷ್ಯಾದಲ್ಲಿ ಪ್ರಾದೇಶಿಕ ಸಹಕಾರಕ್ಕೆ ಶಾಂತಿಯುತ ವಾತಾವರಣದ ಆಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಭಯೋತ್ಪಾದನೆಯೊಂದೇ ಅತ್ಯಂತ ದೊಡ್ಡ ಸಮಸ್ಯೆಯಾಗಿದ್ದು, ಶಾಂತಿಯುತ ವಾತಾವರಣವನ್ನು ಕದಡುವ ಪ್ರಯತ್ನ ಮಾಡುತ್ತಿದೆ ಎಂದು ಪರೋಕ್ಷವಾಗಿ ಪಾಕಿಸ್ತಾನಕ್ಕೆ ಟಾಂಗ್ ನೀಡಿದ್ದಾರೆ.
ತಮ್ಮ ಮಾತನ್ನು ಮುಗಿಸಿ ಸುಷ್ಮಾ ಸ್ವರಾಜ್ ಸಭೆಯಿಂದ ಹೊರನಡೆದಿದ್ದಾರೆ. ಈ ಬೆಳವಣಿಗೆ ಪಾಕಿಸ್ತಾನಕ್ಕೆ ಅಚ್ಚರಿ ಮೂಡಿಸಿದ್ದು, ಇದನ್ನು ಪಾಕಿಸ್ತಾನ ವಿದೇಶಾಂಗ ಸಚಿವರು ಅನಿರೀಕ್ಷಿತ ಎಂದು ಬಣ್ಣಿಸಿದ್ದಾರೆ.