ಆ್ಯಪಲ್ ಉದ್ಯೋಗಿ ಮೇಲೆ ಪೊಲೀಸ್ ಫೈರ್: ಆಕಸ್ಮಿಕ ಘಟನೆ: ಸಿಎಂ ಆದಿತ್ಯನಾಥ್

ಲಖನೌ: ಆ್ಯಪಲ್ ಉದ್ಯೋಗಿ ವಿವೇಕ್ ತಿವಾರಿ ಮೇಲೆ ನಡೆದ ಪೊಲೀಸರ ಗುಂಡಿನ ದಾಳಿ ಎನ್ ಕೌಂಟರ್ ಅಲ್ಲ. ಇದೊಂದು ಆಕಸ್ಮಿಕ ಘಟನೆಯಾಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಯೋಗಿ ಆದಿತ್ಯಾನಾಥ್ ಅವರು, ಘಟನೆಗೆ ಸಂಬಂಧಿಸಿದಂತೆ ತಾವು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಇದು ಆಕಸ್ಮಿಕ ಘಟನೆಯೇ ಹೊರತು ಎನ್ ಕೌಂಟರ್ ಅಲ್ಲ. ಘಟನೆಗೆ ಸಂಬಂಧಿಸಿದಂತೆ ತಾವು ಸಿಬಿಐ ತನಿಖೆ ನಡೆಸಲು ನಿರ್ಧರಿಸಿದ್ದೇವೆ ಎಂದರು.

ಆರೋಪಿ ಪೇದೆ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಪೂರ್ಣ ಮಾಹಿತಿ ಸಿಕ್ಕ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ