ನವದೆಹಲಿ: ಅಂತರಾಷ್ಟ್ರೀಯ ಗಡಿಯಲ್ಲಿ ಉಗ್ರರು ವಿನಾಶಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆ, ಭಾರತ ಎಂದಿಗೂ ಸುಮ್ಮನೆ ಕೂರುವುದಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗುಡುಗಿದ್ದಾರೆ.
ಸರ್ಜಿಕಲ್ ಸ್ಟ್ರೈಕ್ ಗೆ ಎರಡು ವರ್ಷಗಳಾಗಿರುವ ಹಿನ್ನಲೆಯಲ್ಲಿ ಮಾತನಾಡಿರುವ ಅವರು, ಗಡಿಯಲ್ಲಿ ಉಗ್ರರು ವಿನಾಶಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆ, ಭಾರತ ಕೈಕಟ್ಟಿಕೊಂಡು ಕುಳಿತು ನೋಡುವುದಿಲ್ಲ. ಉಗ್ರರಿಗೆ ಬೆಂಬಲ ನೀಡುತ್ತಿರುವವರನ್ನು ಶಿಕ್ಷಿಸಲಾಗುತ್ತದೆ ಎಂದು ಹೇಳಿದ್ದಾರೆ.
ಭಾರತೀಯ ಯೋಧರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ. ಸೀಮಿತ ದಾಳಿ ನಡೆಸಿ 2 ವರ್ಷಗಳಾಗಿದ್ದು, ಇದರ ಆಚರಣೆ ಮಾಡುತ್ತಿದ್ದೇವೆ. ಏಕೆಂದರೆ, ನಮ್ಮ ಭಾರತೀಯ ಯೋಧರ ತ್ಯಾಗ ಹಾಗೂ ಬಲಿದಾನ ಜನರಿಗೆ ತಿಳಿಯಬೇಕು. ಸೀಮಿತ ದಾಳಿ ಮೂಲಕ ಶತ್ರುಗಳಿಗೆ ಎಚ್ಚರಿಕೆ ರವಾನಿಸಿದ್ದೇವೆ ಎಂದರು.