ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ನೂತನ ಮೇಯರ್ ಗಂಗಾಂಬಿಕೆ

ಬೆಂಗಳೂರು, ಸೆ.29-ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಮೇಯರ್, ನಮ್ಮ ಪಕ್ಷದ ಹಿರಿಯ ನಾಯಕರು ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದು ಅಭಿನಂದನೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ಆಡಳಿತದಲ್ಲಿ ಅಗತ್ಯ ಸಲಹೆ, ಸಹಕಾರ ನೀಡುವಂತೆ ಮನವಿ ಮಾಡಿದ್ದೇನೆ. ಅವರೂ ಕೂಡ ಒಳ್ಳೆಯ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ -ಜೆಡಿಎಸ್ ಮೈತ್ರಿಗೆ ಅಡ್ಡಿ ಬಾರದಂತೆ ಕೆಲಸ ಮಾಡುತ್ತೇನೆ. ನಮ್ಮ ಪಕ್ಷದ ನಾಯಕರ ಹೆಸರಿಗೆ ಚ್ಯುತಿ ಬರದಂತೆ ಕೆಲಸ ನಿರ್ವಹಿಸಿ ಒಳ್ಳೆಯ ಹೆಸರು ತರುವುದಾಗಿ ಗಂಗಾಂಬಿಕೆ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ