ಬೆಂಗಳೂರು, ಸೆ.29-ಕಾಲೇಜು ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೀಣ್ಯ 2ನೇ ಹಂತದ ನಿವಾಸಿ ಮೌನೇಶ್ (21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ಮೂಲತಃ ಶಿವಮೊಗ್ಗದ ಶಿಕಾರಿಪುರ ವಾಸಿಯಾದ ಮೌನೇಶ್ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ರಾತ್ರಿ ಮನೆಯಲ್ಲಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಳೆದ ವರ್ಷ ಪದವಿಯಲ್ಲಿ ಅನುತ್ತೀರ್ಣನಾಗಿದ್ದ ಈತ ಪುನಃ ಈ ಬಾರಿಯೂ ಪರೀಕ್ಷೆ ಬರೆದಿದ್ದು, ಈ ಪರೀಕ್ಷೆಯಲ್ಲೂ ಫೇಲಾದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ರಾಜಗೋಪಾಲ ನಗರ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.